ಉಡುಪಿ: ಬೆಂಗಳೂರಿನ ವಿಧಾನಸೌಧದಲ್ಲಿ ಇಂದು (ಸೆ.11) ಸರ್ಕಾರಿ ಭರವಸೆಗಳ ಸಮಿತಿ ಇದರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಚರ್ಚೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರುಳು ನೀತಿ ರೂಪಿಸುವ ಬಗ್ಗೆ ಮಾತನಾಡಿದರು.
ಕರಾವಳಿ ಭಾಗದ ಭೌಗೋಳಿಕ ಅಂಶಗಳನ್ನು ಆದರಿಸಿ ಪ್ರತ್ಯೇಕ ಮರಳು ನೀತಿ ರೂಪಿಸುವ ಬಗ್ಗೆ ಚರ್ಚಿಸಿ ಈ ಭಾಗದ ಮರಳಿನ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಸಿ.ಆರ್.ಝಡ್ ಹಾಗೂ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಮರಳನ್ನು ತೆಗೆಯುವುದು ಮತ್ತು ಸಾಂಪ್ರದಾಯಕ ಮರಳು ತೆಗೆಯಲು ಅವಕಾಶ ಕಲ್ಪಿಸುವ ಬಗ್ಗೆ ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
Comments are closed.