ಕರ್ನಾಟಕ

ದೆಹಲಿಯಲ್ಲಿ ನಿಧನರಾಗಿದ್ದ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂಬ ಗೊಂದಲಕ್ಕೆ ತೆರೆ

Pinterest LinkedIn Tumblr


ನವದೆಹಲಿ: ಕೊರೋನಾ ಸೋಂಕಿಗೆ ನಿಧನರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ನವದೆಹಲಿಯಲ್ಲಿ ನೆರವೇರಿತು.

ಸಕಲ ಸರ್ಕಾರಿ ಗೌರವ ಹಾಗೂ ಲಿಂಗಾಯತ ವಿಧಿ ವಿಧಾನಗಳ ಮೂಲಕ ಸಚಿವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಸಚಿವವರ ಅಂತ್ಯಕ್ರಿಯೆಯನ್ನು ಎಲ್ಲಿ ಮಾಡಬೇಕೆಂಬುದೇ ದೊಡ್ಡ ಗೊಂದಲವಾಗಿತ್ತು. ಕುಟುಂಬ ವರ್ಗದವರು ಸಹಜವಾಗಿ ಸುರೇಶ್ ಅಂಗಡಿಯವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ಮಾಡಲು ಬಯಸಿದ್ದರು. ಆದರೆ, ಕೋವಿಡ್ ಶಿಷ್ಟಾಚಾರದ ಪ್ರಕಾರ ಅವರ ಹುಟ್ಟೂರಿಗೆ ಕೊಂಡೊಯ್ಯಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಲಿಲ್ಲ‌. ಹಾಗಾಗಿ ದೆಹಲಿಯಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಯಿತು. ದೆಹಲಿಯಲ್ಲೇ ಅಂತ್ಯಕ್ರಿಯೆ ಮಾಡಬೇಕೆಂದು ನಿಶ್ಚಯಿಸಿದ ಬಳಿಕ ದೆಹಲಿಯಲ್ಲಿ ಎಲ್ಲಿ ಮಾಡಬೇಕಂಬ ಗೊಂದಲ ನಿರ್ಮಾಣವಾಗಿತ್ತು. ಕಡೆಗೆ ದೆಹಲಿಯ ದ್ವಾರಕಾ ಸೆಕ್ಟರ್ 24 ರಲ್ಲಿರುವ ಲಿಂಗಾಯತರ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಯಿತು.

ಸುರೇಶ್ ಅಂಗಡಿ ಕೊರೋನಾಗೆ ಬಲಿಯಾದ ಕಾರಣ ಕೋವಿಡ್ ಶಿಷ್ಟಾಚಾರದ ಪ್ರಕಾರವೇ ಅವರನ್ನು ಮಣ್ಣು ಮಾಡಲಾಯಿತು. ರುದ್ರಭೂಮಿಗೆ ಕೆಲವೇ ಕೆಲವು ಜನರಿಗೆ ಪ್ರವೇಶಾವಕಾಶ ನೀಡಲಾಗಿತ್ತು. ಕುಟುಂಬ ವರ್ಗದವರು ಪಿಪಿಇ ಕಿಟ್ ಹಾಕಿಕೊಂಡೆ ಪೂಜಾ ವಿಧಾನಗಳನ್ನು ಪೂರೈಸಿದರು.

ಅಂತ್ಯಕ್ರಿಯೆ ವೇಳೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು, ಬೀಗರಾದ ಸಚಿವ ಜಗದೀಶ್ ಶೆಟ್ಟರ್, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ರಮೇಶ್ ಜಾರಕಿಹೊಳಿ‌, ಸಂಸದರಾದ ಈರಣ್ಣ ಕಡಾಡಿ, ಅಣ್ಣಸಾಹೇಬ್ ಜೊಲ್ಲೆ ಇದ್ದರು.

Comments are closed.