ಮಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ 20-21ನೇ ಸಾಲಿಗೆ ಮಹಿಳೆಯರು ಕೈಗೊಳ್ಳುವ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕಾ ಚಟುವಟಿಕೆ ಗಳಿಗೆ ಆರ್ಥಿಕ ಸಹಾಯ ನೀಡುವ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಆಸಕ್ತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಯೋಮಿತಿ 18-55 ವರ್ಷದೊಳಗಿನ ಮಹಿಳೆಯರಿಗೆ ಅವಕಾಶವಿರುತ್ತದೆ. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ಮೀರಿರಬಾರದು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 16 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ) ಕಚೇರಿ ಹಾಗೂ ದೂರವಾಣಿ ಸಂಖ್ಯೆ 0824-2263199 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Comments are closed.