ಕರಾವಳಿ

ಮಹಡಿಯಿಂದ ಜಿಗಿದು ಉಡುಪಿಯ ವೃದ್ದ ಆತ್ಮಹತ್ಯೆ

Pinterest LinkedIn Tumblr

ಉಡುಪಿ: ವೃದ್ಧರೊರ್ವರು ಅಜ್ಜರಕಾಡು ಜಿಲ್ಲಾಸ್ಪತ್ರೆ ಸಮೀಪದ ವಸತಿ ಸಂಕೀರ್ಣದ 11 ನೇ ಮಹಡಿಯ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಪಿ. ನಾರಾಯಣ ಪೂಜಾರಿ (80) ಕೊಡಂಕೂರಿನ ನಿವಾಸಿ ಎಂದು ಗುರುತಿಸಲಾಗಿದೆ.

ಮೃತ ದೇಹವನ್ನು ಶವಗಾರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆಯನ್ನು ನೀಡಿ ಇಲಾಖೆಗೆ ಸಹಕರಿಸಿದರು.

ಪೋಲಿಸ್ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Comments are closed.