ಕರಾವಳಿ

ಯೂತ್ ಕಾಂಗ್ರೆಸ್ಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ಪೊಲೀಸ್ ಠಾಣೆಗೆ ದೂರು

Pinterest LinkedIn Tumblr

ಮಂಗಳೂರು : ದ.ಕ. ಜಿಲ್ಲಾ ಯೂತ್ ಕಾಂಗ್ರೆಸ್ಸ್ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶ ದ ಗೌರವಾನ್ವಿತ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಜಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ಖಂಡನೆ ವ್ಯಕ್ತಪಡಿಸಿದೆ.

ಮಾತ್ರವಲ್ಲದೇ ಯೋಗಿ ಆದಿತ್ಯನಾಥ್ ಜಿ ಅವರ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ನಾಥ ಸಮಾಜವನ್ನು ಅವಮಾನಿಸಿದ್ದಾರೆ. ಈ ರೀತಿಯ ಹೇಳಿಕೆಗಳ ಮೂಲಕ ಜಿಲ್ಲೆಯಲ್ಲಿ ಶಾಂತಿ ಕದಡಲು ಪ್ರೇರೇಪಿಸಿರುತ್ತಾರೆ ಎಂದು ಆರೋಪಿಸಿ ಈ ಬಗ್ಗೆ ಬರ್ಕೆ ಪೊಲೀಸ್ ನಿರೀಕ್ಷಕರಿಗೆ ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ದೂರು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಗುರುದತ್ ಜಿ ನಾಯಕ್ ಪ್ರಧಾನ ಕಾರ್ಯದರ್ಶಿಗಳಾದ ಸೂರಜ್ ಮರ್ನಾಡ್, ಸುದರ್ಶನ್ ಬಜ, ಹಿಂದುಳಿದ ವರ್ಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮತ್ತು ವಕೀಲರಾದ ಮಹೇಶ್ ಜೋಗಿ, ಯುವ ಮೋರ್ಚಾ ಉಪಾಧ್ಯಕ್ಷ ವಿನ್ಯಾಸ್ ಶೆಟ್ಟಿ , ಅಭಿಲಾಷ್ ಶೆಟ್ಟಿ, ಹಾಗೂ ಶಿವ್ ದೇಶ ಕೊಡಿ , ಅವಿಕ್ಷಿತ್ ರೈ, ಕಿರಣ್ ಶಂಕರ್ ಮಲ್ಯ ಜೊತೆಗಿದ್ದರು

Comments are closed.