ಮುಂಬೈ: ಬಸ್ಸೊಂದು ಕಣಿವೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 5 ಮಂದಿ ಸಾವನ್ನಪ್ಪಿದ್ದು, ಸುಮಾರು 34 ಜನರು ಗಂಭೀರ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಂದುರ್ಬರ್ ಜಿಲ್ಲೆಯ ಬಳಿ ನಡೆದಿದೆ.
ಇಂದು ಮುಂಜಾನೆ 3.15ರ ಸಮಯದಲ್ಲಿ ಕೊಂಡೈಬರಿ ಘಾಟ್ ಎಂಬಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದ ಖಾಸಗಿ ಬಸ್ ಮಲ್ಕಪುರದಿಂದ ಗುಜರಾತ್ನ ಸೂರತ್ಗೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕೊಂಡೈಬರು ಘಾಟ್ಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಸುಮಾರು 30 ಅಡಿ ಆಳಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಘಟನೆಯಲ್ಲಿ ಬಸ್ನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನು 34 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ವಿಸರ್ವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Comments are closed.