ಕರ್ನಾಟಕ

ಅತಿವೃಷ್ಟಿಯಿಂದ ಹಾನಿಗೊಳಗಾದ ಕಲಬುರ್ಗಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡ ಸಿಎಂ ಯಡಿಯೂರಪ್ಪ

Pinterest LinkedIn Tumblr

ಕಲಬುರಗಿ: ಉತ್ತರ ಕರ್ನಾಟಕದ ಕಲಬುರ್ಗಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ಕೈಗೊಂಡರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಉಪಸ್ಥಿತರಿದ್ದರು.

“ಜನರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಅಗತ್ಯ ಸೌಕರ್ಯ ಒದಗಿಸಲು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಈ ಸಮಯ ಭರವಸೆ ನೀಡಿದ್ದಾರೆ.

Comments are closed.