ನವದೆಹಲಿ: 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಮುಂಬೈ ಪೊಲೀಸರಿಂದ ಬಂಧಿಸಲ್ಪಟ್ಟಿರುವ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಡಿವೈ ಚಂದ್ರಚೂಡಾ ಮತ್ತು ಇಂದಿರಾ ಬ್ಯಾನರ್ಜೀ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಅರ್ನಬ್ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತು.
ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
2018ರ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಇಬ್ಬರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳುವಂತೆ ಅದು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು.
ಪ್ರಕರಣದಲ್ಲಿ ಗೋಸ್ವಾಮಿ ಹಾಗೂ ಇನ್ನಿಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದ್ದರಿಂ ಮತ್ತು ಅದಕ್ಕಾಗಿ ಕೆಳನ್ಯಾಯಾಲಯಕ್ಕೆ ತೆರಳುವಂತೆ ಕೋರಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್ ಗೋಸ್ವಾಮಿ ಮೇಲಿದೆ. ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿಬಂದಿತ್ತು.
“ಅರ್ನಬ್ ಗೋಸ್ವಾಮಿ ಮತ್ತು ಇನ್ನಿಬ್ಬರು ತಮಗೆ 5.4 ಕೋಟಿ ರೂ. ಹಣ ನೀಡಬೇಕು. ಆ ಹಣ ನೀಡಲು ಅವರು ಒಪ್ಪುತ್ತಿಲ್ಲ. ಇದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ,” ಎಂದು ಡೆತ್ ನೋಟ್ ಬರೆದಿಟ್ಟು ಅನ್ವಯ್ ನಾಯಕ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗ ಸಾವನ್ನಪ್ಪಿರುವುದು ಗೊತ್ತಾಗುತ್ತಿದ್ದಂತೆ ಅನ್ವಯ್ ಅವರ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.
ಈ ಪ್ರಕರಣದ ವಿಚಾರವಾಗಿ ಕಳೆದ ವಾರ ಅರ್ನಬ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿ ಎಂದು ಅರ್ನಬ್ ಬಾಂಬೇ ಹೈಕೋರ್ಟ್ಗೆ ಮನವಿ ಮಾಡಿದ್ದರು. ಆದರೆ, ಈ ಮನವಿ ತಿರಸ್ಕರಿಸಿರುವ ನ್ಯಾಯಾಲಯ, ಕೆಳ ಹಂತದ ಕೋರ್ಟ್ಗೆ ತೆರಳಿ ಜಾಮೀನು ಕೋರಬಹುದು ಎಂದು ಹೇಳಿತ್ತು.
Comments are closed.