ಹಾಸನ : ಸೋಮವಾರ (ಇಂದು) ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನ ಮುಚ್ಚಲಾಗುತ್ತದೆ.
Comments are closed.