ಮಂಗಳೂರು : ನಾಳೆಯಿಂದ (ನವಂಬರ್ 17) ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟನ್ನು ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದ.ಕ. ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅಥವಾ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬಹುದಾಗಿದೆ.
ಈಗಾಗಲೇ ಕೋವಿಡ್ ಟೆಸ್ಟ್ನ ಮ್ಯಾಪಿಂಗ್ ಕಾಲೇಜುಗಳು ಲಿಂಕ್ ಮಾಡಲಾಗಿದೆ. ಕೋವಿ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಕಾಲೇಜುಗಳಿಗೆ ಪ್ರವೇಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.