ರಾಷ್ಟ್ರೀಯ

ದೇಶದ ಪ್ರತಿಷ್ಠಿತ ಕಣ್ಣಿನ ಆಸ್ಪತ್ರೆ ವಾಸನ್ ಐ ಕೇರ್ ಸ್ಥಾಪಕ ಎಎಂ ಅರುಣ್ ಅನುಮಾನಾಸ್ಪದ ಸಾವು

Pinterest LinkedIn Tumblr


ಚೆನ್ನೈ: ದೇಶದ ಪ್ರತಿಷ್ಠಿತ ಕಣ್ಣಿನ ಆಸ್ಪತ್ರೆಗಳಲ್ಲೊಂದಾದ ವಾಸನ್​ ಐ ಕೇರ್​ ಸ್ಥಾಪಕ ಎಎಂ ಅರುಣ್​ ಅವರು ಇಂದು ನಿಧನ ಹೊಂದಿದ್ದಾರೆ.

52ರ ಹರೆಯದ ಅರುಣ್ ಅವರದ್ದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದಿದ್ದಾರೆ.

ತಮಿಳುನಾಡಿನ ತಿರುಚ್ಚಿಯಲ್ಲಿ ಕುಟುಂಬ ನಡೆಸಿಕೊಂಡು ಹೋಗುತ್ತಿದ್ದ ಔಷಧಾಲಯ ಉದ್ಯಮವನ್ನು 1991ರಲ್ಲಿ ಅರುಣ್​ ಕೈಗೆತ್ತಿಕೊಂಡರು. ವಾಸನ್​ ಮೆಡಿಕಲ್​ ಹಾಲ್​ ಎಂಬುದು ಇದರ ಹೆಸರಾಗಿತ್ತು. 2002ರಲ್ಲಿ ತಿರುಚ್ಚಿಯಲ್ಲಿ ವಾಸನ್​ ಐ ಕೇರ್​ ಹೆಸರಿನ ಕಣ್ಣಿನ ಆಸ್ಪತ್ರೆಯನ್ನು ಅರುಣ್​ ಆರಂಭಿಸಿ​ದರು. ಇದು ಅವರು ಸ್ಥಾಪಿಸಿದ ಮೊದಲ ಕಣ್ಣಿನ ಆಸ್ಪತ್ರೆ.

ನಂತರ ವರುಣ್​ ದಕ್ಷಿಣ ಭಾರತದಲ್ಲಿ 100ಕ್ಕೂ ಅಧಿಕ ಕಡೆಗಳಲ್ಲಿ ಕಣ್ಣಿನ ಆಸ್ಪತ್ರೆಯನ್ನು ಆರಂಭಿಸಿದರು. ವಾಸನ್​ ಐ ಕೇರ್​ ಕಣ್ಣಿನನ ಚಿಕಿತ್ಸೆಗೆ ತುಂಬಾನೇ ಹೆಸರು ಮಾಡಿತ್ತು. ಆದರೆ, 2015ರಲ್ಲಿ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಕಾರ್ತಿ ಭಾಗಿಯಾಗಿದ್ದ ಅಕ್ರಮ ಹಣ ವಹಿವಾಟಿನ ಪ್ರಕರಣದಲ್ಲಿ ವಾಸನ್​ ಐ ಕೇಸ್​ ಹೆಸರು ಸೇರಿಕೊಂಡಿತ್ತು. ಕಾರ್ತಿ ಕಪ್ಪು ಹಣವನ್ನು ಬಿಳಿ ಮಾಡಲು ಈ ಸಂಸ್ಥೆಯನ್ನು ಬಳಕೆ ಮಾಡಿಕೊಂಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ಅನೇಕ ವಾಸನ್​ ಐ ಕೇರ್​ ಮೇಲೆ ತೆರಿಗೆ ಇಲಾಖೆ ಹಾಗೂ ಜಾರಿನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ್ದರು.

2014-15ರಲ್ಲಿ ಇನ್​ಕಮ್​ ಟ್ಯಾಕ್ಸ್​ ರಿಟರ್ನ್​​ ತುಂಬಿಲ್ಲ ಎನ್ನುವ ಕಾರಣಕ್ಕೆ ಅರುಣ್​ ಹಾಗೂ ಅವರ ಪತ್ನಿ ಮೀರಾ ವಿರುದ್ಧ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಜಾಮೀನು ರಹಿತ ವಾರಂಟ್​ ಹೊರಡಿಸಿತ್ತು. ಆರಂಭದಲ್ಲಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಸಂಸ್ಥೆಯಾಗಿದ್ದ ವಾಸನ್​ ಐ ಕೇರ್​ ಈಗ ಬಿಡ್ಡರ್​ಗಾಗಿ ಹುಡುಕಾಟ ನಡೆಸುತ್ತಿದೆ.

Comments are closed.