ಕರ್ನಾಟಕ

ಇಂದು ಬೆಂಗಳೂರಿನಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರ ಕಾಲ್ನಡಿಗೆ ಜಾಥಾ; ರಾಜ್ಯಾದ್ಯಂತ ರಸ್ತೆಗಿಳಿಯದ ಬಸ್ ಗಳು

Pinterest LinkedIn Tumblr


ಬೆಂಗಳೂರು: ಈ ತಿಂಗಳು ಸಾಲು-ಸಾಲು ಪ್ರತಿಭಟನೆಗಳ ನಡುವೆ ಇಂದು ಗುರುವಾರ ಮತ್ತೊಂದು ಪ್ರತಿಭಟನೆ ಇದೆ. ಸಾರಿಗೆ ನೌಕರರು ಬೆಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದ್ದಾರೆ.

ಹೌದು ಸಾರಿಗೆ ನೌಕರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸಾರಿಗೆ ನೌಕರರ ಜಾಥಾ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಅಲ್ಲಿಂದ ವಿಧಾನಸೌಧಧವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ. ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ಹೋರಾಟ ನಡೆಸಲಿದ್ದಾರೆ. ಈ ಕಾಲ್ನಡಿಗೆ ಜಾಥಾದಲ್ಲಿ ಸಾರಿಗೆ ನೌಕರರು ಅವರ ಹೆಂಡತಿ ಮಕ್ಕಳೊಂದಿಗೆ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು, ಕೆಎಸ್​ಆರ್​ಟಿಸಿ, ಬಿಎಂಟಿಸಿ ಹಾಗೂ ಎನ್​​ಇಕೆಆರ್​​ಟಿಸಿ ಸೇರಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳೇನು ಎಂಬುದನ್ನು ನೋಡುವುದಾದರೆ,

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು.
ಸರ್ಕಾರಿ ನೌಕರರಿಗೆ ನೀಡುವಂತಹ ಸವಲತ್ತುಗಳನ್ನು ಸಾರಿಗೆ ನೌಕರರಿಗೂ ನೀಡಬೇಕು.
ಕೊರೋನಾ ಸಂದರ್ಭದಲ್ಲಿ ಮೃತಪಟ್ಟ ಸಾರಿಗೆ ನೌಕರರಿಗೆ ಘೋಷಣೆ ಮಾಡಿದ್ದ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು.

ಇಂದು ಸಾರಿಗೆ ನೌಕರರ ಧರಣಿ ಇರುವುದರಿಂದ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಇಂದು ಬಸ್​ ಮೂಲಕ ಹೋಗುವ ಯೋಚನೆ ಹಾಕಿಕೊಂಡಿದ್ದರೆ ಮುಂದೂಡುವುದು ಒಳಿತು. ಯಾವುದೇ ಬಸ್ ರಸ್ತೆಗಿಳಿಯುವುದಿಲ್ಲ.

Comments are closed.