ಕರಾವಳಿ

ಗ್ರಾ.ಪಂ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭ: ಅಭ್ಯರ್ಥಿಗಳ ಎದೆಯಲ್ಲಿ ಢವಢವ…!

Pinterest LinkedIn Tumblr

ಉಡುಪಿ: ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತದಾನದ ಏಳು ತಾಲೂಕುಗಳ ಮತ ಎಣಿಕೆ ಕಾರ್ಯ ಬೆಳಿಗ್ಗೆನಿಂದ ಆರಂಭಗೊಂಡಿದೆ‌.

ಉಡುಪಿ ಜಿಲ್ಲೆಯ ಏಳು ತಾಲೂಕುಗಳ ಒಟ್ಟು 152 ಪಂಚಾಯತ್ ಗಳ ಒಟ್ಟು 863 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಒಟ್ಟು 1136 ಮತಗಟ್ಟೆಗಳಲ್ಲಿ 5,83,342 ಮಂದಿ ಮತಚಲಾಯಿಸಿದ್ದರು.

ಜಿಲ್ಲೆಯ ಏಳು ತಾಲೂಕು ಕೇಂದ್ರಗಳಾದ ಉಡುಪಿ – ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ, ಬ್ರಹ್ಮಾವರ – ಎಸ್ ಎಂ ಎಸ್ ಪದವಿಪೂರ್ವ ಕಾಲೇಜು, ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜು, ಹೆಬ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜು, ಕಾರ್ಕಳದ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕಾಪುವಿನ ದಂಡತೀರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ.

ಜಿಲ್ಲೆಯ 150 ಗ್ರಾಮ ಪಂಚಾಯತ್ ಗಳ ಮತ ಎಣಿಕೆ ಕಾರ್ಯಕ್ಕೆ ಒಟ್ಟು 948 ಸಿಬಂದಿಗಳನ್ನು ನಿಯೋಜಿಸಲಾಗಿದ್ದು ಒಟ್ಟು 863 ಚುನಾವಣಾ ಕ್ಷೇತ್ರಗಳ ಮತ ಎಣಿಕೆಗೆ 284 ಟೇಬಲ್ ವ್ಯವಸ್ಥೆ ಮಾಡಲಾಗಿದೆ.

ಮತ ಎಣಿಕೆಯಲ್ಲಿ 5057 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಜಿಲ್ಲೆಯಲ್ಲಿ 152 ಗ್ರಾ.ಪಂ.ಗಳ ಒಟ್ಟು 2225 ಸದಸ್ಯ ಸ್ಥಾನಗಳಿಗೆ 5057 ಮಂದಿ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು 128 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದಾರೆ

Comments are closed.