ನವದೆಹಲಿ: ರೂಪಾಂತರ ಕೊರೊನಾ ಪ್ರಕರಣಗಳು ಅಧಿಕವಾಗುತ್ತಿರುವ ಕಾರಣ ಇಂಗ್ಲೆಂಡ್ ನಿಂದ ಬರುವ ಪ್ರಯಾಣಿಕರ ವಿಮಾನಗಳ ಸಂಚಾರವನ್ನು ಜನವರಿ 7ರವರೆಗೂ ಸ್ಥಗಿತಗೊಳಿಸಲಾಗಿದೆ.
ಜನವರಿ 7ರ ಬಳಿಕ ಕಠಿಣ ನಿಯಮಗಳನ್ನು ಜಾರಿಗೊಳಿಸಿ ವಿಮಾನ ಸಂಚಾರವನ್ನು ಪುನರಾರಂಭಿಸಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಹರದೀಪ್ ಸಿಂಗ್ ಪುರಿ ಬುಧವಾರ ತಿಳಿಸಿದ್ದಾರೆ.
ಕಳೆದ ವಾರ ನಾಗರಿಕ ವಿಮಾನಯಾನ ಸಚಿವಾಲಯವು ಭಾರತ ಮತ್ತು ಬ್ರಿಟನ್ ನಡುವೆ ಸಂಚರಿಸುವ ಎಲ್ಲ ವಿಮಾನಗಳನ್ನು ಡಿಸೆಂಬರ್ 23ರಿಂದ 31ರವರೆಗೆ ಸ್ಥಗಿತಗೊಳಿಸಿತ್ತು.
Comments are closed.