ಮಂಗಳೂರು: ಕಾಂಗ್ರೆಸ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಲುಕ್ಮಾನ್ ಬಂಟ್ವಾಳ ಆಯ್ಕೆಯಾಗಿದ್ದಾರೆ.
ಜನವರಿ 10,11,12 ನೇ ದಿನಾಂಕದಂದು ರಾಜ್ಯಾದ್ಯಂತ ಯುವ ಕಾಂಗ್ರೆಸ್ ಬ್ಲಾಕ್, ಜಿಲ್ಲೆ ಮತ್ತು ರಾಜ್ಯ ಮಟ್ಟಕ್ಕೆ ಚುನಾವಣೆ ನಡೆಸಲಾಗಿತ್ತು. ಚುನಾವಣೆಯು ಪಾರದರ್ಶಕವಾಗಿ ನಡೆಯಬೇಕೆಂಬ ನಿಟ್ಟಿನಲ್ಲಿ ಮೊಬೈಲ್ ಅಪ್ಲಿಕೇಶನ್ ಮೂಲಕ ಚುನಾವಣೆ ನಡೆಸಲಾಗಿತ್ತು.
ಅಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ 5,573 ಮತಗಳನ್ನು ಗಳಿಸಿದ್ದರೆ, ನಿಕಟಸ್ಫರ್ಧಿ ಗಿರೀಶ್ ಆಳ್ವಾ 4,169 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಹಮ್ಮದ್ ಶುಹೈಬ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಒಟ್ಟು 14,065 ಮತಗಳಲ್ಲಿ 3,518 ಮತಗಳನ್ನು ತಿರಸ್ಕರಿಸಲಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ನ ಅಧಿಕೃತ ವೆಬ್ ಸೈಟ್ ನಲ್ಲಿ ಘೋಷಿಸಲಾಗಿದೆ.
Comments are closed.