ಕರಾವಳಿ

ನಾಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಂಗಳೂರಿಗೆ..

Pinterest LinkedIn Tumblr

ಮಂಗಳೂರು, ಫೆಬ್ರವರಿ 06 : ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರವರು ಫೆಬ್ರವರಿ 7 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಫೆಬ್ರವರಿ 7 ರಂದು ಬೆಳಿಗ್ಗೆ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ 10.30ಕ್ಕೆ ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. 11.45 ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ಚತುಷ್ದಥ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

12.15 ಕ್ಕೆ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರದ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 5.15 ಗಂಟೆಗೆ ಮರವೂರು-ಮಂಗಳೂರು ತಾಲೂಕಿನ-ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ನಂ.67ರ ರಸ್ತೆ ಕಿ.ಮೀ 12.98 ರಿಂದ 14.80 ಕಿ.ಮೀ ವರೆಗೆ ಚತುಷ್ಟದ ರಸ್ತೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7.35 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Comments are closed.