(ಕಡತ ಚಿತ್ರ)
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎಪ್ರಿಲ್ 29ರಂದು 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗಲು ಇಚ್ಛಿಸುವವರು ಏ.15ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಹೆಸರು ನೋಂದಣಿ ಮಾಡುವಂತೆ ಕೋರಲಾಗಿದೆ.
ವರದಕ್ಷಿಣೆ ಹಾಗೂ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹ ಪ್ರತಿ ವರ್ಷ ನಡೆಯುತ್ತಿದ್ದು, ಈವರೆಗೂ 12,262 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಏ.29ರಂದು ಗುರುವಾರ ಸಂಜೆ 6.48ಕ್ಕೆ ಗೋಧೂಳಿ ಲಗ್ನದಲ್ಲಿ ವಿವಾಹಗಳು ನೆರವೇರಲಿದ್ದು, ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸಲಿದೆ. ಇಲ್ಲಿ 2ನೇ ಮದುವೆಗೆ ಅವಕಾಶವಿರುವುದಿಲ್ಲ. ಎಂದು ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ದೂ: 08256-266644, ವಾಟ್ಸಪ್ ನಂ: 8147263422, 9663464648 ಸಂಪರ್ಕಿಸ ಬಹುದು.
Comments are closed.