ರೈನಿ (ಉತ್ತರಾಖಂಡ್): ಉತ್ತರಾಖಂಡದ ಚಮೋಲಿಯಲ್ಲಿ ಸಂಭವಿಸಿದ ಹಿಮಸುನಾಮಿ ದುರಂತದಲ್ಲಿ ಮೃತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಿಮ ಸ್ಫೋಟದಿಂದ ಉಂಟಾದ ಪ್ರವಾಹದಿಂದ 207 ಮಂದಿ ನಾಪತ್ತೆಯಾಗಿದ್ದು, ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲಕಾನಂದ ಮತ್ತು ದೌಲಿಗಂಗದಲ್ಲಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಹಿಮಸುನಾಮಿಯಿಂದ ತಪೋವನ್ ಹೈಡ್ರೋಪವರ್ ಯೋಜನೆ ಮತ್ತು ರಿಷಿಗಂಗಾದ ಹೈಡೆಲ್ ಪ್ರಾಜೆಕ್ಟ್ ಗೆ ಭಾರೀ ಹಾನಿಯಾಗಿದ್ದು, ಪ್ರವಾಹದ ಕಾರಣದಿಂದ ಹಲವು ಮನೆಗಳು ಕೊಚ್ಚಿಹೋಗಿವೆ.
ಘಟನಾ ಸ್ಥಳದಲ್ಲಿ ಐಟಿಬಿಪಿ, ಎನ್’ಡಿಆರ್’ಎಫ್, ಸೇನೆ, ರಾಜ್ಯ ವಿಪತ್ತು ನಿರ್ವಹಣೆ ಪಡೆಯ ಸಾವಿರಾರು ಸಿಬ್ಬಂದಿ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆದರೆ, ಸ್ಥಳದಲ್ಲಿ ಭಾರೀ ಕೆಸರು, ಹೂಳು, ತಾಪಮಾನ ಶೂನ್ಯದ ಆಸುಪಾಸಿಗೆ ಬಂದ ಕಾರಣ, ಸಿಬ್ಬಂದಿಗಳನ್ನೇ ಭಾರೀ ಹವಾಮಾನ ವೈಪರೀತ್ಯದಿಂದ ರಕ್ಷಣೆ ಮಾಡಬೇಕಾದ ಪರಿಸ್ಥಿತಿಯೂ ಎದುರಾಗಿದೆ. ಇನ್ನು ಸುರಂದಲ್ಲಿರುವ 25-35 ಜನರ ಜೊತೆಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.
Comments are closed.