ಮೈಸೂರು: ಸಂಚಾರಿ ಪೊಲೀಸ್ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿ ಬೈಕ್ನಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಿನಕಲ್ ರಿಂಗ್ ರಸ್ತೆಯಲ್ಲಿ ನಡೆದಿದೆ.
ಘಟನೆ ಹಿನಕಲ್ ರಿಂಗ್ ರಸ್ತೆಯಲ್ಲಿ ವಿವಿ ಪುರಂ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದು, ಈ ವೇಳೆ ಹೆಲ್ಮೆಟ್ ಹಾಕಿದ್ದರೂ ಬೈಕ್ ಸವಾರನೋರ್ವನನ್ನು ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರನ ಹ್ಯಾಂಡಲ್ಗೆ ಪೊಲೀಸರ ಲಾಠಿ ಸಿಲುಕಿಕೊಂಡು ಆಯತಪ್ಪಿ ಕೆಳಗೆ ಬಿದ್ದಿದ್ದಾನೆಂದು ಆರೋಪಿಸಲಾಗಿದೆ. ಇದೇ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ವಾಹನವೊಂದು ಸವಾರನ ಮೇಲೆ ಹರಿದಿದ್ದರ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
Comments are closed.