ಕರಾವಳಿ

ಲಾಕ್ ಡೌನ್ ಇಲ್ಲ : ಸಭೆ ಸಮಾರಂಭಕ್ಕೆ ಡಿ.ಸಿ. ಅನುಮತಿ ಅಗತ್ಯ – ಮಾಸ್ಕ್ ಕಡ್ಡಾಯ- ಕಟ್ಟು ನಿಟ್ಟಿನ ಕ್ರಮ ಪಾಲಿಸಲು ಆದೇಶ

Pinterest LinkedIn Tumblr

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಲಾಕ್ ಡೌನ್ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ. ಕೊರೊನಾ ನಿಯಂತ್ರಣಕ್ಕಾಗಿ ಜನರು ಕಟ್ಟು ನಿಟ್ಟಿನ ಕ್ರಮ ಅನುಸರಿಸಬೇಕು.

ರಾಜ್ಯಾದ್ಯಂತ ಯಾವುದೇ ಸಭೆ, ಸಮಾರಂಭ ಮಾಡಬೇಕಿದ್ದರೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಜನರು ಮನೆಯಿಂದ ಹೊರಗೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗುಂಪುಗೂಡದ ರೀತಿ ಎಚ್ಚರಿಕೆ ವಹಿಸಬೇಕು. ಶಾಲಾ ಕಾಲೇಜುಗಳಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಚಾಲ್ತಿಯಲ್ಲಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

Comments are closed.