ಮಂಗಳೂರು, ಎಪ್ರಿಲ್ 06 : ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಎಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಎಪ್ರಿಲ್ 8 ರಂದು ಸಂಜೆ 4.10 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಸ್ಥಳೀಯರಿಂದ ಮನವಿ ಸ್ವೀಕರಿಸಲಿದ್ದಾರೆ. ಸಂಜೆ 5.30ಕ್ಕೆ ಪುತ್ತೂರು ನೆಹರು ನಗರದ ವಿವೇಕಾನಂದ ಕ್ಯಾಂಪಸ್‍ನಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದವರು ನಿರ್ಮಿಸಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ (CBSC) ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 6.30ಕ್ಕೆ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ 20ನೇ ವರ್ಷದ (ವಿಂಶತಿ) ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ರಾತ್ರಿ 8ಕ್ಕೆ ಗಂಟೆಗೆ ಪುತ್ತೂರು ತಾಲೂಕಿನ ಕೆಳಗಿನ ಕುಂಜಾಡಿ ಗ್ರಾಮದಲ್ಲಿ ನಡೆಯಲಿರುವ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಪುತ್ತೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಎಪ್ರಿಲ್ 9 ರಂದು ಬೆಳಿಗ್ಗೆ 9 ಗಂಟೆಗೆ ಕಡಬ ತಾಲೂಕಿನ ರಾಮಕುಂಜದ ಶ್ರೀ ರಾಮ ಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪೂಜ್ಯ ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 11.30 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Comments are closed.