ಮುಂಬೈ: ಆರ್ ಸಿಬಿ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ದೇವದತ್ ಪಡಿಕ್ಕಲ್ ತಂಡಕ್ಕೆ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ರಾಜಸ್ತಾನ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 177 ರನ್ ಪೇರಿಸಿತ್ತು. ಇನ್ನು ಆರ್ ಆರ್ ನೀಡಿದ 178 ರನ್ ಗಳ ಗುರಿ ಬೆನ್ನಟ್ಟಿದ ಆರ್ ಸಿಬಿ ತಂಡ ವಿಕೆಟ್ ನಷ್ಟವಿಲ್ಲದೆ 181 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಆರ್ ಸಿಬಿ ಪರ ದೇವದತ್ ಪಡಿಕ್ಕಲ್ 101 ರನ್ ಬಾರಿಸಿದ್ದು ನಾಯಕ ವಿರಾಟ್ ಕೊಹ್ಲಿ 72 ರನ್ ಬಾರಿಸಿದ್ದಾರೆ.
ರಾಜಸ್ತಾನ ಪರ ಜೋಸ್ ಬಟ್ಲರ್ 8, ಮನನ್ ವೊವ್ರಾ 7 ಮತ್ತು ಡೇವಿಡ್ ಮಿಲ್ಲರ್ ಶೂನ್ಯಕ್ಕೆ ಔಟಾಗಿದ್ದರು. ನಾಯಕ ಸಂಜು ಸ್ಯಾಮ್ಸನ್ 21, ರಿಯಾನ್ ಪರಾಗ್ 25, ಶಿವಂ ದುಬೆ 46, ರಾಹುಲ್ ತೆವಾಟಿಯಾ 40 ರನ್ ಪೇರಿಸಿದ್ದಾರೆ.
ಬೆಂಗಳೂರು ಪರ ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ 3 ಮತ್ತು ಜ್ಯಾಮಿನ್ಸನ್, ರಿಚರ್ಡ್ಸನ್ ಮತ್ತು ಸುಂದರ್ 1 ವಿಕೆಟ್ ಪಡೆದಿದ್ದಾರೆ.
ಐಪಿಎಲ್ 14ನೇ ಆವೃತ್ತಿಯಲ್ಲಿ ಸತತ ನಾಲ್ಕನೇ ಗೆಲುವು ದಾಖಲಿಸಿರುವ ಆರ್ ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
Comments are closed.