ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕೊಡಿಯಾಲ್ ಬೈಲ್ ವಾರ್ಡಿನ ಶಾರದಾ ವಿದ್ಯಾಲಯ ರಸ್ತೆ ಅಗಲೀಕರಣ ಸಂಬಂಧಿಸಿದಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಸ್ಥಳೀಯ ನಿವಾಸಿಗಳ ಜೊತೆ ಸಭೆ ನಡೆಸಿದರು.
ರಸ್ತೆ ಅಗಲೀಕರಣಕ್ಕೆ ಬೇಕಾಗುವ ಸ್ಥಳ ಬಿಟ್ಟುಕೊಡಲು ಈಗಾಗಲೇ ಬಹುತೇಕ ಸ್ಥಳೀಯರು ಒಪ್ಪಿಗೆ ನೀಡಿದ್ದಾರೆ. ಒಂದೆರಡು ಮನೆಯವರು ಜಾಗ ಬಿಟ್ಟು ಕೊಟ್ಟಿರಲಿಲ್ಲ. ಹೀಗಾಗಿ ಅವರೊಂದಿಗೆ ಚರ್ಚಿಸಲಾಗಿದೆ. ಸದ್ಯ ಅವರೂ ಕೂಡ ಸ್ಥಳ ಬಿಟ್ಟುಕೊಡಲು ಬಹುತೇಕ ಒಪ್ಪಿಗೆ ನೀಡಿದ್ದಾರೆ. ಜಾಗ ಬಿಟ್ಟುಕೊಟ್ಟ ತಕ್ಷಣ ಅಭಿವೃದ್ಧಿ ಕಾಮಗಾರಿಗಳು ಮತ್ತಷ್ಟು ವೇಗ ಪಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು, ಸ್ಥಳೀಯ ಮನಪಾ ಸದಸ್ಯರು ಹಾಗೂ ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ, ಕದ್ರಿ ಮನೋಹರ್ ಶೆಟ್ಟಿ, ಶಾರದಾ ವಿದ್ಯಾಲಯದ ಪ್ರಮುಖರಾದ ಎಂ. ಬಿ ಪುರಾಣಿಕ್, ಸಂಬಂಧಪಟ್ಟ ಅದಗಿಕಾರಿಗಳು ಉಪಸ್ಥಿತರಿದ್ದರು.
Comments are closed.