ಕರಾವಳಿ

ದ.ಕ.ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಇಂದು ಲಸಿಕೆ ಲಭ್ಯ :ಇಲ್ಲಿದೆ ಕೇಂದ್ರಗಳ ವಿವರ

Pinterest LinkedIn Tumblr

ಮಂಗಳೂರು, ಜೂನ್ 16 : ಕೋವಿಡ್-19 ಲಸಿಕಾಕರಣಕ್ಕೆ ಸಂಬಂಧಿಸಿದಂತೆ, ಜೂನ್ 16 ರಂದು ದ.ಕ.ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಲಭ್ಯವಿದೆ.

ಮಂಗಳೂರು, ಬಂಟ್ವಾಳ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ನಗರ ಆರೋಗ್ಯ ಕೇಂದ್ರಗಳು ಹಾಗೂ ಸುಳ್ಯ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜ ಮತ್ತು ಅರಂತೋಡು ವ್ಯಾಪ್ತಿಯಲ್ಲಿ 45 ವರ್ಷ ಮೇಲ್ಪಟ್ಟ ಫಲಾನುಭವಿಗಳು ಹಾಗೂ ಪ್ರಥಮ ಡೋಸ್ ಲಸಿಕೆಯನ್ನು ಪಡೆದ 84 ದಿನ ಪೂರೈಸಿರುವ ಫಲಾನುಭವಿಗಳು ಕೋವಿಶೀಲ್ಡ್ ಲಸಿಕೆಯನ್ನು ಪಡೆಯಬಹುದಾಗಿದೆ.

ಮಂಗಳೂರು ನಗರ ಆರೋಗ್ಯ ಕೇಂದ್ರಗಳು, ಬಂಟ್ವಾಳ ನಗರ ಆರೋಗ್ಯ ಕೇಂದ್ರ, ಪುತ್ತೂರು ನಗರ ಆರೋಗ್ಯ ಕೇಂದ್ರ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲ, ತಾಲೂಕು ಆಸ್ಪತ್ರೆ ಬಂಟ್ವಾಳ ಮತ್ತು ಪುತ್ತೂರು ಇಲ್ಲಿ ಲಸಿಕೆ ಪಡೆಯುವ ಫಲಾನುಭವಿಗಳು COWIN ನಲ್ಲಿ Registration ಮಾಡಿ Appointment schedule ಮಾಡಿ, 4 digit ನ security code ಬಂದವರಿಗೆ ಮಾತ್ರ ಲಸಿಕೆ ತೆಗೆದುಕೊಳ್ಳಲು ಅವಕಾಶವಿರುತ್ತದೆ.

ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಹಾಗೂ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆಯನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳು ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.