ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮಾಜಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ನುಗ್ಗಿದ ಉಗ್ರರು, ಅಧಿಕಾರಿ ಮತ್ತು ಅವರ ಪತ್ನಿ, ಪುತ್ರಿ ಯನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಆವಂತಿಪೋರಾದ ಹರಿಪರಿಗಂ ನಿವಾಸಿಯಾದ ಫಯಾಜ್ ಅಹಮದ್ ಅವರ ಮನೆಗೆ ರಾತ್ರಿ ಸುಮಾರು 11 ಗಂಟೆಗೆ ನುಗ್ಗಿದ ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫಯಾಜ್ ಅಹಮದ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಗಂಭೀರವಾಗಿ ಗಾಯಗೊಂಡಿದ್ದ ಫಯಾಜ್ ಅವರ ಪತ್ನಿ ರಜಾ ಬೇಗಮ್ ಹಾಗೂ ಅವರ ಪುತ್ರಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳವನ್ನು ಸುತ್ತುವರೆದ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಚುರುಕುಗೊಳಿಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
Comments are closed.