ಕರ್ನಾಟಕ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ 20 ವರ್ಷ ಶಿಕ್ಷೆ, 30 ಸಾವಿರ ದಂಡ

Pinterest LinkedIn Tumblr

ಕೊಡಗು: ಕೊಡಗು ಜಿಲ್ಲೆಯ ವಿರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ವಿರಾಜಪೇಟೆ ಹೆಚ್ಚುವರಿ ಸತ್ರ ನ್ಯಾಯಾಲಯವು 20 ವರ್ಷ ಶಿಕ್ಷೆ ಹಾಗು 30 ಸಾವಿರ ದಂಡ ವಿಧಿಸಿ ಆದೇಶಿಸಿದೆ.

ಅಪ್ರಾಪ್ತೆ ಅತ್ಯಾಚಾರದ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಿನಾಂಕ 6-12-2018 ರಂದು ಮೊಕದ್ದಮೆ ದಾಖಲುಗೊಂಡಿತ್ತು. ಈ ಪ್ರಕರಣವನ್ನು ವಿರಾಜಪೇಟೆ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನಿರೀಕ್ಷಕ ಎನ್. ಕುಮಾರ ಆರಾದ್ಯ ಅವರು ತನಿಖೆ ನಡೆಸಿ 20-12-2018 ರಂದು ನ್ಯಾಯಾಲಯಕ್ಕೆ ಅಂತಿಮ ದೋಷಾರೋಪಣ ವರದಿಯನ್ನು ಸಲ್ಲಿಸಿದ್ದರು.

ವಿರಾಜಪೇಟೆಯ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕ ಯಾಸಿನ್ ಅಹಮ್ಮದ್ ವಾದ ಮಂಡಿಸಿದ್ದರು.

 

 

Comments are closed.