ಕರಾವಳಿ

ಸಾವಿನಲ್ಲೂ ಹಲವರ ಬಾಳಿಗೆ ಬೆಳಕಾದ ಹಾವೇರಿ ಮೂಲದ ಯುವತಿ; ಅಂಗಾಗ ದಾನ ಮಾಡಿ ಪೋಷಕರ ಮಾನವೀಯತೆ

Pinterest LinkedIn Tumblr

ಮಂಗಳೂರು/ರಟ್ಟಿಹಳ್ಳಿ: 20 ವರ್ಷದ ಯುವತಿಯೊಬ್ಬರು ಸಾವಿನ‌ಬಳಿಕ ಇತರರ ಬದುಕಿಗೆ ಬೆಳಕಾಗುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದಿದೆ.

ಹಳ್ಲೂರಿನ ಗ್ರಾಮದ ಕವನಾ ಮಳ್ಳಯ್ಯ ಹಿರೇಮಠ (20) ಶಿಕಾರಿಪುರದ ಗಾಮೆಂಟ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಸೆ. 9ರಂದು ಹೊನ್ನಾಳಿ ತಾಲೂಕು ಸೊರಟೂರ ಗ್ರಾಮದ ಬಳಿ ಓಮಿನಿ-ಚಕ್ಕಡಿಗಾಡಿ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಕವನಾ ಗಂಭೀರವಾಗಿ ಗಾಯಗೊಂಡಿದ್ದರು. ಕವನ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಏಟಾಗಿದ್ದರಿಂದ ಕೋಮಾಕ್ಕೆ ಹೋಗಿದ್ದು ಅವರ ಮೆದುಳು ನಿಷ್ಕ್ರೀಯಗೊಂಡಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಅಕೆ ಅಂಗಾಂಗವಾದರೂ ಇತರರಿಗೆ ಬದುಕು ನೀಡಲಿ ಎಂದು ನಿರ್ಧರಿಸಿದ ಆಕೆಯ ಕುಟುಂಬಸ್ಥರು ವೈದ್ಯರೊಂದಿಗೆ ಚರ್ಚಿಸಿದರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೃತಳ ಕುಟುಂಬಸ್ಥರು ಕಿಡ್ನಿ, ಹೃದಯ, ಲಿವರ್‌, ಕಣ್ಣು, ಚರ್ಮ ದಾನ ಮಾಡಿದರು. ತಕ್ಷಣವೇ ಅಂಗಾಂಗಗಳನ್ನು ಬೇರೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಇದರಿಂದ ನಾಲ್ವರ ಬಾಳಿಗೆ ಬೆಳಕು‌ ಸಿಕ್ಕಂತಾಗಿದೆ.

Comments are closed.