ಬೆಂಗಳೂರು: ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೆಪ್ಟೆಂಬರ್ 14ರ ಮಂಗಳವಾರದಂದು ವಿಧಾನಸೌಧದ ಸಮಿತಿ ಕಚೇರಿಯಲ್ಲಿ ನಡೆದ ಸೆಪ್ಟೆಂಬರ್ 17ರಂದು ನಡೆಯುವ ಬೃಹತ್ ಲಸಿಕಾ ಮೇಳದ ಕುರಿತು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.
18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆಯನ್ನು ನೀಡುವ ಕೆಲಸವಾಗಬೇಕು ಹಾಗೂ ಈ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.
ಸೆಪ್ಟೆಂಬರ್ 17ರಂದು ಸರಿಯಾದ ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಪೂರ್ವ ಸಿದ್ಧತಾ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನಸಿರ್ಂಗ್ ಕಾಲೇಜುಗಳ ವೈದ್ಯಕೀಯ ಸಿಬ್ಬಂದಿಗಳ ಸಹಯೋಗ ಪಡೆದುಕೊಂಡು ಜಿಲ್ಲಗೆ ನೀಡಿದ ಗುರಿಯನ್ನು ಸಾಧಿಸಿ ಎಂದು ಕರೆ ನೀಡಿದರು.
ಸಂಬಂಧಪಟ್ಟ ಅಧಿಕಾರಿಗಳು ಗಡಿಭಾಗದ ಗ್ರಾಮಗಳು ಹಾಗೂ ನಗರ ಪ್ರದೇಶದಲ್ಲಿ ಕೊಳಗೇರಿಗಳಲ್ಲಿ ವಾಸಿಸುವ ಮನೆಗಳಿಗೆ ಭೇಟಿ ನೀಡಿ ಹಾಗೂ ಹೆಚ್ಚು ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯಲು ತಿಳಿಸಿದರು.
Comments are closed.