ಬೆಂಗಳೂರು: ಅಕ್ರಮ ವಲಸೆ ವಿಚಾರದಲ್ಲಿ ಸರಕಾರ ಗಂಭೀರ ವಾಗಿದ್ದು. ವಲಸಿಗರ ಮೇಲೆ ಕಣ್ಗಾವಲು ಇರಿಸಲಾಗುತ್ತಿದೆ. ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ಪೊಲೀಸರು ಮತ್ತು ಆಂತರಿಕ ಭದ್ರತ ವಿಭಾಗಕ್ಕೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ರಾಜ್ಯವನ್ನು ಅಕ್ರಮ ವಲಸಿಗರ ನೆಲೆಯಾಗಲು ಮತ್ತು ‘ಧರ್ಮ ಛತ್ರ’ವಾಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಮತ್ತು ರೊಹಿಂಗ್ಯಾ ಮುಸ್ಲಿಮರನ್ನು ಪತ್ತೆ ಹಚ್ಚುವ ವಿಚಾರವಾಗಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪಿ.ಎಂ. ಮುನಿರಾಜು ಗೌಡ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವರು ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮವಾಗಿ ಯಾವುದೇ ವಿದೇಶಿ ನಾಗರಿಕರು ಅಥವಾ ರೊಹಿಂಗ್ಯಾ ಮುಸ್ಲಿಮರು ಮಸೀದಿ ಅಥವಾ ಮದ್ರಸಗಳಲ್ಲಿ ವಾಸವಾಗಿರುವ ಪ್ರಕರಣ ವರದಿಯಾಗಿಲ್ಲ. ಆದರೆ ಇಂಥದ್ದನ್ನು ನಿಯಂತ್ರಿಸಲು ಎಲ್ಲ ನಗರ ಮತ್ತು ಜಿಲ್ಲಾ ಮಟ್ಟದಲ್ಲಿ ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಇಂಥವರ ಪತ್ತೆಗೆ ಸ್ಥಳೀಯ ಪೊಲೀಸರು ಮತ್ತು ವಿಶೇಷ ಕಾರ್ಯಪಡೆಯ ಸಿಬಂದಿ ನಿರಂತರ ಕಾರ್ಯಪ್ರವೃತ್ತರಾಗಿರುತ್ತಾರೆ ಎಂದು ಸಚಿವರು ತಿಳಿಸಿದರು.
Comments are closed.