ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ಅವರಿಗೆ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ ಎಂದು ತಿಳಿದುಬಂದಿದೆ.
ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಗಂಭೀರ ಆರೋಗ್ಯ ಸಮಸ್ಯೆಯಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಪಡೆಯುತ್ತಿದ್ದು, ಶಿವರಾಜ್ ಕುಮಾರ್ ಪುತ್ರಿ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನುವ ಮಾಹಿತಿಯಿದೆ.
Comments are closed.