ಕರ್ನಾಟಕ

ಬೆಂಗಳೂರು: ಗಸ್ತಿನಲ್ಲಿದ್ದ ಪಿಎಸ್ಐ, ಕಾನ್ಸ್‌ಟೆಬಲ್ ಮೇಲೆ ಹಲ್ಲೆ; ಇಬ್ಬರ ಬಂಧನ

Pinterest LinkedIn Tumblr

ಬೆಂಗಳೂರು: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಇಂಜಿನಿಯರ್ ಸೇರಿದಂತೆ ಇಬ್ಬರನ್ನು ಯಲಹಂಕ ನ್ಯೂ ಟೌನ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

(ಸಾಂದರ್ಭಿಕ ಚಿತ್ರ)

ಆರೋಪಿಗಳು ಯಲಹಂಕ ನಿವಾಸಿಗಳಾಗಿದ್ದು, ಗಸ್ತು ತಿರುಗುತ್ತಿದ್ದಾಗ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಶ್ರೀಶೈಲ ಮತ್ತು ಪೊಲೀಸ್ ಪೇದೆ ಅಸ್ಲಾಂ ಮೇಲೆ ಹಲ್ಲೆ ನಡೆಸಿದ್ದಾರೆ.

ಪೊಲೀಸರು ಬೈಕ್‌ನಲ್ಲಿ ಬಂದು ಕಿರಿದಾದ ರಸ್ತೆಯಲ್ಲಿ ಎದುರುಗಡೆಯಿಂದ ಬರುತ್ತಿದ್ದ ಆರೋಪಿಗಳ ಕಾರನ್ನು ಅಡ್ಡಗಟ್ಟಿದ್ದಾರೆ. ನಿರ್ಮಾಣ ಹಂತದಲ್ಲಿರುವ ರಸ್ತೆಯನ್ನು ಒಂದು ಬದಿಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು ಮತ್ತೊಂದು ಬದಿಯಲ್ಲಿ ಎರಡೂ ದಿಕ್ಕಿನ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಆರೋಪಿಗಳು ಮತ್ತೊಂದು ದಿಕ್ಕಿನಲ್ಲಿ ಚಲಿಸುತ್ತಿದ್ದರು. ಇದನ್ನು ಗಮನಿಸಿದ ಕರ್ತವ್ಯ ನಿರತ ಪೊಲೀಸರು ಅವರ ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ್ದಾರೆ.

ಅವರ ಕಾರಿಂದ ಇತರರ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ವಾಹನವನ್ನು ಸ್ಥಳಾಂತರಿಸುವಂತೆ ಪೊಲೀಸರು ಮನವಿ ಮಾಡಿದಾಗ ಆರೋಪಿಗಳು ಕಾರಿನಿಂದ ಇಳಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕರ್ತವ್ಯ ನಿರತ ಪೊಲೀಸರಿಗೆ ಕಪಾಳಕ್ಕೆ ಹೊಡೆದು ಹಲ್ಲೆ ನಡೆಸಿದ್ದಾರೆ. ಇಬ್ಬರು ಪೊಲೀಸರು ತಕ್ಷಣವೇ ಬ್ಯಾಕ್‌ಅಪ್‌ಗಾಗಿ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಿಸಿದ ಇತರೆ ಪೊಲೀಸ್ ಸಿಬ್ಬಂದಿಗಳು ಅವರನ್ನು ಬಂಧಿಸಿದ್ದಾರೆ.

ಸದ್ಯ ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Comments are closed.