ಹಾವೇರಿ: ರಾಜ್ಯದಲ್ಲಿ ಮತ್ತೊಮ್ಮೆ ಸಿಎಂ ಬದಲಾವಣೆ ಬಗ್ಗೆಗಿನ ಚರ್ಚೆ ಮುನ್ನೆಲೆಗೆಬಂದಿಸೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾಗಿ ಮಾತನಾಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಎದ್ದಿದೆ.
ಸ್ವ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗುವ ಮೂಲಕ ಹೊಸ ಚರ್ಚೆ ಹುಟ್ಟುಹಾಕಿದ್ದು, ಜನವರಿಯಲ್ಲಿ ಸಿಎಂ ಬದಲಾವಣೆಯಾಗಲಿದೆಯೇ ಎಂಬ ಕುತೂಹಲ ಮೂಡಿದೆ.
ಹಾವೇರಿಯ ಶಿಗ್ಗಾವಂನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಅನಾವರಣ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಸ್ವ ಕ್ಷೇತ್ರದ ಕಾರ್ಯಕ್ರಮದಲ್ಲಿ ಕೊಂಚ ಭಾವುಕರಾದ ಸಿಎಂ ಯಾವುದು ಶಾಶ್ವತ ಅಲ್ಲ. ಈ ಬದುಕೇ ಶಾಶ್ವತ ಅಲ್ಲ. ನಾವು ಎಷ್ಟು ದಿನ ಇರ್ತೆವೋ ಗೊತ್ತಿಲ್ಲ. ಸ್ಥಾನಮಾನಗಳು ಶಾಶ್ವತವಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿ ನಿಂತಿದ್ದೇನೆ.
ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ್ ಬೊಮ್ಮಾಯಿ ಆಗಿ ಉಳಿಯುತ್ತೇನೆ. ಬಸವರಾಜ್ ಬೊಮ್ಮಾಯಿ ಅನ್ನೋದು ಮಾತ್ರ ಶಾಶ್ವತ. ಅದರ ಹಿಂದಿನ ಪದನಾಮಗಳು ಶಾಶ್ವತವಲ್ಲ ಎಂದಿದ್ದಾರೆ. ನಾನು ನಿಮ್ಮೂರಿಗೆ ಬಂದಾಗ ನೀವು ರೊಟ್ಟಿ ತಿನ್ನಿಸಿದ್ದೀರಿ, ನವಣೆ ಅನ್ನ ಮಾಡಿ ಹಾಕಿದ್ದೀರಿ. ನಾನೇನೂ ಕೆಲಸ ಮಾಡಿದರೂ ಆ ಋಣ ತೀರಿಸಲು ಆಗೋದಿಲ್ಲ ಎಂದು ಭಾವುಕರಾದರು.
ಸಿಎಂ ಈ ಭಾವುಕ ಭಾಷಣ ರಾಜಕೀಯ ವಲಯ ದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಸಿಎಂ ಸದ್ಯದಲ್ಲೇ ತಮ್ಮ ಸ್ಥಾನ ತೊರೆಯಲಿದ್ದು ಅದಕ್ಕಾಗಿಯೇ ಕ್ಷೇತ್ರದ ಜನತೆ ಮುಂದೇ ನೋವು ತಾಳಲಾರದೇ ಭಾವುಕರಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪೂರಕ ಎಂಬಂತೆ ಕೆಲ ದಿನಗಳ ಹಿಂದೆಯಷ್ಟೇ ಹಿರಿಯ ಬಿಜೆಪಿ ನಾಯಕ ಹಾಗೂ ಸಚಿವ ಈಶ್ವರಪ್ಪ ಹಾಗೂ ಮುರುಗೇಶ್ ನಿರಾಣಿಯೂ ಸಿಎಂ ಆಗುತ್ತಾರೆ ಎಂದಿದ್ದರು.
Comments are closed.