ಬೆಂಗಳೂರು: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಪ್ರಕಟಗೊಂಡಿದ್ದು, ಆಡಳಿತಾರೂಢ ಬಿಜೆಪಿಗಿಂತ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಜೆಡಿಎಸ್ ಕೂಡ ಉತ್ತಮ ಸಾಧನೆ ಮಾಡಿದೆ.
ಪಟ್ಟಣ ಪಂಚಾಯತಿಯ ಒಟ್ಟು 577 ಸ್ಥಾನಗಳ ಪೈಕಿ ಕಾಂಗ್ರೆಸ್ 236 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 194 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದೆ. ಜೆಡಿಎಸ್ ಪಕ್ಷ 12 ಸ್ಥಾನ ಪಡೆದಿದೆ.
ಇನ್ನು ಪುರಸಭೆಯ ಒಟ್ಟು 441 ಸ್ಥಾನಗಳ ಪೈಕಿ ಕಾಂಗ್ರೆಸ್ 201 ಸ್ಥಾನಗಳಲ್ಲಿ ಜಯಗಳಿಸಿದ್ದು, ಬಿಜೆಪಿ 176 ಸ್ಥಾನಗಳಲ್ಲಿ ಜಯಗಳಿಸಿದ್ದರೆ ಜೆಡಿಎಸ್ 43 ಸ್ಥಾನಗಳನ್ನು ಗಳಿಸಿಕೊಂಡಿದೆ.
ಆದರೆ ನಗರಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಒಟ್ಟು 166 ಸ್ಥಾನಗಳ ಪೈಕಿ ಕಾಂಗ್ರೆಸ್ 61 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಬಿಜೆಪಿ 67 ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ 12 ಮತ್ತು ಇತರರು 26 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.
Comments are closed.