ಮಂಗಳೂರು/ಉಡುಪಿ: ಅವಿಭಜಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತೆ ಉಲ್ಬಣಗೊಂಡಿದೆ. ಉಡುಪಿಯ 125, ಕುಂದಾಪುರದ 9 ಹಾಗೂ ಕಾರ್ಕಳದ 14 ಮಂದಿ ಸಹಿತ ಒಟ್ಟು 148 ಮಂದಿಗೆ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 211 ಮಂದಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಬೆಂಗಳೂರು, ಮೈಸೂರು ಹೊರತುಪಡಿಸಿ ದ.ಕ. ಜಿಲ್ಲೆಯಲ್ಲೇ ಅತೀ ಹೆಚ್ಚಿನ ಕೋವಿಡ್ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ 6,005 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 17 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 558 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.2.46ಕ್ಕೆ ಹೆಚ್ಚಳಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಸರಿಸುಮಾರು 3 ತಿಂಗಳ ಬಳಿಕ ಕೊರೋನಾ ಸೋಂಕು 100ರ ಗಡಿ ದಾಟಿದೆ.
ಇನ್ನು ಮಂಗಳೂರಿನ ಎರಡು ಖಾಸಗಿ ಮೆಡಿಕಲ್ ಕಾಲೇಜು ವಸತಿ ನಿಲಯ ಮತ್ತು ಒಂದು ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯ ಪ್ರದೇಶವನ್ನು ಕ್ಲಸ್ಟರ್ ವಲಯವನ್ನಾಗಿ ಘೋಷಣೆ ಮಾಡಲಾಗಿದೆ. ಮೂರೂ ವಸತಿ ನಿಲಯಗಳಲ್ಲಿ ಒಟ್ಟು 56 ಮಂದಿಗೆ ಕೊರೊನಾ ದೃಢಪಟ್ಟಿದ್ದು, 961 ಮಂದಿಯನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಲಾಗಿದೆ. ಕೊರೊನಾ ದೃಢಪಟ್ಟವರು ಕೇರಳ ಮೂಲದ ಟ್ರಾವೆಲ್ ಹಿಸ್ಟರಿ ಹೊಂದಿದವರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.