ಮಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟಲು ಸರಕಾರ ಕೈಗೊಂಡಿರುವ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.
(ಸಂಗ್ರಹ ಚಿತ್ರಗಳು)
ಸರಕಾರದ ಮಾರ್ಗಸೂಚಿಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಮುಂದಿನ ಆದೇಶದವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.
ಇನ್ನು ವೀಕೆಂಡ್ ಕರ್ಫ್ಯೂ ಹೊರತುಪಡಿಸಿ ಇತರೆ ದಿನಗಳಲ್ಲಿ ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಯನ್ನು ದೇವಸ್ಥಾನಗಳಲ್ಲಿ ಪಾಲಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
Comments are closed.