ಕರಾವಳಿ

ಮಂಗಳೂರಿನ ಸೀಫುಡ್ ಫ್ಯಾಕ್ಟರಿಯಲ್ಲಿ ವಿಷ ಅನಿಲ ಸೋರಿಕೆ; 20 ಕಾರ್ಮಿಕರು ಆಸ್ಪತ್ರೆಗೆ ದಾಖಲು

Pinterest LinkedIn Tumblr

ಮಂಗಳೂರು: ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿಅಮೋನಿಯಾ ಕೆಮಿಕಲ್ ಸೋರಿಯಾಗಿ 20 ಮಂದಿ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.

ಎವರೆಸ್ಟ್ ಸೀಫುಡ್ ಫ್ಯಾಕ್ಟರಿಯಲ್ಲಿ ಒಟ್ಟು 80 ಜನ ಕಾರ್ಮಿಕರಿದ್ದು ವಿಷಾನೀಲ ಸೋರಿಕೆಯಿಂದ 20 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಅಸ್ವಸ್ಥಗೊಂಡ ಕಾರ್ಮಿಕರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಣಂಬೂರು ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.

Comments are closed.