ಕುಂದಾಪುರ: ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ಹರ್ಷರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಮತ್ತು ಪ್ರತಿಭಟನೆ ನಡೆಸಲಾಯಿತು. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಲ್ಲಿ ಪ್ರತಿಭಟನೆ ವೇಳೆ ಠಾಣೆಗೆ ತೆರಳಿ ಮನವಿ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಹಿಜಾಬ್ ಮತ್ತು ಸಮವಸ್ತ್ರ ವಿಷಯದಲ್ಲಿ ಕಾಂಗ್ರೆಸ್ ನ ಗೊಂದಲದ ನಿಲುವಿನಿಂದ ಆಗಿರುವ ಹಾನಿ ಸರಿಪಡಿಸಿಕೊಳ್ಳುವ ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸ್ವಾರ್ಥ ಹುನ್ನಾರಕ್ಕಾಗಿ ರಾಜ್ಯದ ಮಹತ್ವದ ಅಧಿವೇಶನವನ್ನು ವ್ಯರ್ಥ ಮಾಡಿರುವುದು ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ ಮಾಡಿರುವ ದ್ರೋಹವೇ ಸರಿ ಹಾಗೆಯೇ ಹರ್ಷರವರ ಕೊಲೆ ಆರೋಪಿಗಳನ್ನು ಆದಷ್ಟು ಬೇಗ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬೈಂದೂರು ಮಂಡಲದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.