ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಮಹಾಶಿವರಾತ್ರಿಯಂದು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಅಮೂಲ್ಯ ಅವರ ಪತಿ ಜಗದೀಶ್ ಆರ್ ಚಂದ್ರ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ‘ಅಮೂಲ್ಯ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ. ಈ ಪಯಣದಲ್ಲಿ ಜತೆ ನಿಂತು ಹಾರೈಸಿದ ಎಲ್ಲರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.
ನಟಿ ಅಮೂಲ್ಯ ಗಂಡು ಮಕ್ಕಳಿಗೆ ಜನ್ಮ ನೀಡುತ್ತಿದ್ದಂತೆ ಸ್ಯಾಂಡಲ್ ವುಡ್ ಕಲಾವಿದರು, ಅವರ ಗೆಳೆಯರು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ನಟಿ ಅಮೂಲ್ಯ ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಉದ್ಯಮಿ ಜಗದೀಶ್ ಚಂದ್ರ ಜೊತೆ 2017ರ ಮೇ ತಿಂಗಳಲ್ಲಿ ಮದುವೆಯಾದ ಬಳಿಕ ನಟನೆಯಿಂದ ದೂರವುಳಿದಿದ್ದರು.
Comments are closed.