ಪ್ರಮುಖ ವರದಿಗಳು

ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ..!

Pinterest LinkedIn Tumblr

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಾದ ಪ್ರತ್ಯೇಕ ಮೂರು ಎನ್ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕಳೆದ ರಾತ್ರಿಯಿಂದಲೇ ಜಮ್ಮು ಮತ್ತು ಕಾಶ್ಮೀಲರ ಪುಲ್ವಾಮಾ, ಗಂದೇರ್ ಬಾಲ್ ಮತ್ತು ಹಂದ್ವಾರಾದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ರಾತ್ರಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಹಾಗೂ ಇಂದು ಬೆಳಿಗ್ಗೆ ನಡೆಸಲಾದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹತ್ಯೆಯಾಗಿರುವ ನಾಲ್ವರು ಉಗ್ರರ ಪೈಕಿ ಇಬ್ಬರು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್, ಮತ್ತಿಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿಸಿದ್ದಾರೆ.
.
ಕುಲ್ಗಾಂ ಜಿಲ್ಲೆಯ ಔಡೋರಾ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಸರಪಂಚ್​ನನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು. ಇದು ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರ ಮೂರನೇ ದಾಳಿಯಾಗಿದೆ.

 

Comments are closed.