ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸಿಎಂ ಇಬ್ರಾಹಿಂ ಅಧಿಕೃತವಾಗಿ ಅವರ ನಿವಾಸದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ವಿಧಾನ ಪರಿಷತ್ ಸ್ಥಾನಕ್ಕೂ ಇಂದೇ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯಗೆ ಕಳುಹಿಸುತ್ತೇನೆ ಎಂದು ತಿಳಿಸಿದರು.
ಸ್ವಾಭಿಮಾನ ಹಾಗೂ ರಾಜ್ಯದ ಹಿತ ದೃಷ್ಟಿಯಿಂದ ರಾಜೀನಾಮೆ ಅನಿವಾರ್ಯವಾಗಿದೆ. ಕಾಂಗ್ರೆಸ್‌ನಲ್ಲಿ ಸ್ವಾಭಿಮಾನ ಉಳಿಸಿಕೊಂಡು ಇರಲು ಸಾಧ್ಯವಿಲ್ಲ. 1994ರಲ್ಲಿ ಆದ ರಾಜಕೀಯ ಸ್ಥಿತಿ 2022ರಲ್ಲೂ ಆಗಲಿದೆ. ಕಾಂಗ್ರೆಸ್ ತನ್ನ ನೆಲೆ ಕಳೆದುಕೊಳ್ಳುತ್ತಿದ್ದು ಪಂಚರಾಜ್ಯ ಚುನಾವಣೆಯಲ್ಲೂ ಇದು ಸಾಭೀತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇವತ್ತು ಅಥವಾ ನಾಳೆ ದೇವೇಗೌಡರು ಕುಮಾರಸ್ವಾಮಿ ಜೊತೆ ಕುಳಿತು ಚರ್ಚೆ ಮಾಡಿ ಮುಂದಿನ ತೀರ್ಮಾನ ಮಾಡುತ್ತೇವೆ ಎಂದವರು ತಿಳಿಸಿದರು.
Comments are closed.