ಕರಾವಳಿ

ಸ್ಕ್ರಾಪ್ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಸಿದ್ಧವಾದ ಸರ್ಕಾರಿ ಶಾಲೆ ‘ಸ್ಮಾರ್ಟ್ ಕ್ಲಾಸ್’ ಉದ್ಘಾಟಿಸಿದ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ

Pinterest LinkedIn Tumblr

(ವರದಿ- ಯೋಗೀಶ್ ಕುಂಭಾಸಿ)

ಕುಂದಾಪುರ: ಸಮಾಜದಲ್ಲಿನ ಕಟ್ಟಕಡೆಯ ಮಗು ವಿದ್ಯಾವಂತನಾದರೆ ಮಾತ್ರ ದೇಶ ಬದಲಾಗಲು ಸಾಧ್ಯವಿದೆ. ಕಷ್ಟದಿಂದ ಓದಿದ ವಿದ್ಯಾರ್ಥಿಗಳು ಭವಿಷ್ಯತ್ತಿನ ಉನ್ನತ ಸ್ಥಾನಕ್ಕೆರುತ್ತಾರೆ. ಶಿಕ್ಷಣದಿಂದ ಯಾವ ಮಗುವೂ ಕೂಡಾ ವಂಚಿತವಾಗಬಾರದು ಎನ್ನುವ ನಿಟ್ಟಿನಲ್ಲಿ ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಒದಗಿಸುವ ಕೊಡುವ ಕಾರ್ಯ ಆಗುತ್ತಿದೆ ಎಂದು ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.

ಶನಿವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ-2, ಬಗ್ವಾಡಿ ಇಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‍ನಲ್ಲಿ ವಿನೂತನ ಮಾದರಿ ಸ್ಮಾರ್ಟ್ ತರಗತಿ ಉದ್ಘಾಟಿಸಿ‌ ಅವರು ಮಾತನಾಡಿದರು.

ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಹಕ್ಲಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಚೇತನ್ ಕುಮಾರ್, ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗ ಮುಖ್ಯಸ್ಥ ಕಮಲ್ ಕುಮಾರ್, ಬೈಂದೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಮ್.ಮುಂದಿನಮನಿ,‌ ಹಕ್ಲಾಡಿ ಗ್ರಾ. ಪಂ ಸದಸ್ಯ ಅಶೋಕ ಪೂಜಾರಿ, ಶಾರದಾ ಮೊಗವೀರ, ಭಾರತ ಸರ್ಕಾರದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ನಿವೃತ್ತ ನಿರ್ದೇಶಕ ಬಿ.ಎನ್.ಶೆಟ್ಟಿ, ಪುರೋಹಿತರಾದ ನಾಗಪ್ಪಯ್ಯ ಭಟ್ ಬೈಲೂರು, ಕೆ.ಎಸ್.ಆರ್.ಟಿ.ಸಿ ಡಿಪೋ ಮೆನೇಜರ್ ರಾಜೇಶ, ಎಸ್.ಡಿ.ಎಂ.ಸಿ ಸಮನ್ವಯ ಸಮಿತಿ ಜಿಲ್ಲಾ ಅಧ್ಯಕ್ಷ ಅಬ್ದುಲ್ ಸಲಾಮ್, ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಉದಯಕುಮಾರ್ ಹಟ್ಟಿಯಂಗಡಿ, ಉದ್ಯಮಿ ಕೆ.ಅಬ್ದುಲ್ ರೆಹಮಾನ್, ಅಜಿತ್ ಕುಮಾರ್ ಬಗ್ವಾಡಿ, ಬಗ್ವಾಡಿ ಮಹಿಷಾಸುರಮರ್ದಿನಿ ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಪುತ್ರನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ.ರಾಜೀವ ಶೆಟ್ಟಿ, ವಿದ್ಯಾರ್ಥಿ ನಾಯಕಿ ಪ್ರಜ್ಞಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಿನಿಯೇಚರ್ ಬಸ್ ನಿರ್ಮಾತೃ ಪ್ರಶಾಂತ ಆಚಾರ್ಯ ಅವರನ್ನು ಶಾಲಾ ಹಾಗೂ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶೈಲಜಾ ವಿ.ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಸಂತರಾಜ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Comments are closed.