Wellwishes

ಅಪ್ಪು​ ನಿವಾಸಕ್ಕೆ ರಾಹುಲ್​ ಗಾಂಧಿ ಭೇಟಿ; ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಾಜ್ ಕುಟುಂಬದ ಜೊತೆ ಮಾತುಕತೆ

Pinterest LinkedIn Tumblr

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕಳೆದ‌ಕೆಲ‌ ತಿಂಗಳ ಹಿಂದೆ ನಿಧನರಾದ ನಟ ದಿ. ಪುನೀತ್‌ ರಾಜ್‌ಕುಮಾರ್‌ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಂಗಳೂರಿನ ಸದಾಶಿವನಗರದ ಪುನೀತ್‌ ನಿವಾಸಕ್ಕೆ ಭೇಟಿ ನೀಡಿ ಪುನೀತ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಹಾಗೂ ಸಹೋದರ ರಾಘವೇಂದ್ರ ರಾಜ್‌ಕುಮಾರ್‌ ಅವರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಪುನೀತ್‌, ಡಾ.ರಾಜ್‌ಕುಮಾರ್‌ ಹಾಗೂ ಪಾರ್ವತಮ್ಮ ರಾಜ್‌ಕುಮಾರ್‌ ಭಾವಚಿತ್ರಗಳಿಗೆ ನಮನ ಸಲ್ಲಿಸಿದರು.

ಈ ವೇಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಇದ್ದರು.

Comments are closed.