ಕರ್ನಾಟಕ

ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ AAP ಪಕ್ಷಕ್ಕೆ ಅಧಿಕೃತ ಸೇರ್ಪಡೆ..!

Pinterest LinkedIn Tumblr

ನವದೆಹಲಿ: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಅವರು ಇಂದು (ಏ.4 ಸೋಮವಾರ) ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಎಎಪಿ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಭಾಸ್ಕರ್ ರಾವ್ ಅವರು ಆಪ್ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಆಪ್ ನಾಯಕ ಪೃಥ್ವಿ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

ಭಾಸ್ಕರ್ ರಾವ್ ಅವರು ಪೊಲೀಸ್ ವೃತ್ತಿಯಿಂದ ಸ್ವಯಂ ನಿವೃತ್ತರಾಗಿದ್ದರು. ರೈಲ್ವೆ ಪೊಲೀಸ್ ಎಡಿಜಿಪಿ ಹುದ್ದೆಗೆ ಸ್ವಯಂ ನಿವೃತ್ತಿ ಕೋರಿ ಸೆಪ್ಟೆಂಬರ್ 2021ರಲ್ಲಿ ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು. ಆದರೆ, ತಮ್ಮ ನಿರ್ಧಾರದಿಂದ ಭಾಸ್ಕರ್ ರಾವ್ ಹಿಂದೆ ಸರಿದಿರಲಿಲ್ಲ.

 

Comments are closed.