ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 22ರಿಂದ ಪಿಯುಸಿ ಪರೀಕ್ಷೆ ನಡೆಯಲಿದೆ. ಪಿಯುಸಿ ಪರೀಕ್ಷೆಗೆ ಇಲಾಖೆ ಸಂಪೂರ್ಣ ತಯಾರಿ ನಡೆಸುತ್ತಿದೆ. ಇದೀಗ ಶಿಕ್ಷಣ ಇಲಾಖೆ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಅದರಂತೆ 22-04-2022 ರಿಂದ 18-05-2022 ರವರೆಗೆ ಪರೀಕ್ಷೆ ನಡೆಯಲಿದೆ.
ಜೆಇಇ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ ಈ ಮೊದಲು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೆಲವು ತಾಂತ್ರಿಕ ಸಮಸ್ಯೆಗಳ ಹಿನ್ನೆಲೆ ಎರಡನೇ ಬಾರಿಗೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿ….
22/04/2022 ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
23/04/2022 ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
25/04/2022 ಅರ್ಥಶಾಸ್ತ್ರ
26/04/2022 ಹಿಂದೂಸ್ತಾನಿ ಸಂಗೀತ, ಮನ:ಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
27/04/2022 ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
28/04/2022 ಕನ್ನಡ, ಅರೇಬಿಕ್
04/05/2022 ಭೂಗೋಳ ಶಾಸ್ತ್ರ, ಜೀವಶಾಸ್ತ್ರ,
05/05/2022 ಮಾಹಿತಿ ತಂತ್ರಜ್ಞಾನ, ರೀಟೈಲ್, ಅಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
06/05/2022 ಇಂಗ್ಲಿಷ್
10/05/2022 ಇತಿಹಾಸ, ಭೌತಶಾಸ್ತ್ರ
12/05/2022 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,
14/05/2022 ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
17/05/2022 ಐಚ್ಛಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
Comments are closed.