ಕರಾವಳಿ

ಮಂಗಳೂರು ಹಂಪನಕಟ್ಟೆ ಬಳಿ ರಸ್ತೆಯಲ್ಲೇ ಹೊತ್ತಿ ಉರಿದ ಬೈಕ್ ಹಾಗೂ ಸಿಟಿ ಬಸ್

Pinterest LinkedIn Tumblr

ಮಂಗಳೂರು: ಅಪಘಾತದ ಬಳಿಕ ಬೆಂಕಿ ತಗುಲಿ ಸಿಟಿ ಬಸ್ ಹಾಗೂ ಬೈಕ್ ಹೊತ್ತಿಯುರಿದ ಘಟನೆ ನಗರದ ಹಂಪನಕಟ್ಟೆ ಬಳಿಯ ವೆನ್ಲಾಕ್ ಆಸ್ಪತ್ರೆ ಬಳಿ ಏ.8ರ ಶುಕ್ರವಾರ ಮಧ್ಯಾಹ್ನ ನಡೆದಿದೆ.

 

ಬೈಕ್ ಬಂದು ಬಸ್‌ಗೆ ಢಿಕ್ಕಿ ಹೊಡೆದ ಬಳಿಕ ಸ್ಪಾರ್ಕ್ ಆಗಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ಸು ಹಾಗೂ ಬೈಕ್ ಎರಡು ವಾಹನಕ್ಕೂ ಬೆಂಕಿ ತಗುಲಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಇನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅದರೆ ಖಾಸಗಿ ಬಸ್ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಹೊತ್ತಿ ಉರಿದ ಕಾರಣ ರಸ್ತೆಯಲ್ಲಿ ಅರ್ಧ ತಾಸು ವಾಹನ ಸಂಚಾರ ಸ್ಥಗಿತಗೊಂಡಿದ್ದು, ದುರ್ಘಟನೆಯಲ್ಲಿ ಬೈಕ್ ಸವಾರ ಡೈಲನ್(25) ಎಂಬವರ ಕಾಲಿಗೆ ಗಂಭೀರ ಏಟಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಬಸ್ಸಿನಲ್ಲಿದ್ದ ಚಾಲಕ ಸೇರಿ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

 

Comments are closed.