ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಪ್ರವಾಸಕ್ಕೆ ಕೈಗೊಳ್ಳಲಿದ್ದು, ಬೆಳಗ್ಗೆ 11.45 ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಗೆ ಆಗಮಿಸುತ್ತಾರೆ.
ಸಿಎಂ ಬೊಮ್ಮಾಯಿ ಅವರು ಮೊದಲಿಗೆ ಕಾಪು ತಾಲೂಕು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಭೇಟಿ ನೀಡಲಿದ್ದು, ದೇವಸ್ಥಾನದ ಬ್ರಹ್ಮಕಲಶದ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ ಡಾ.ಬನ್ನಂಜೆ ಗೋವಿಂದಾಚಾರ್ಯ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ ನಡೆಸುತ್ತಾರೆ. ಹಾಗೂ ಬನ್ನಂಜೆಯಲ್ಲಿರುವ ಡಾ. ವಿ ಎಸ್ ಆಚಾರ್ಯ ಬಸ್ ನಿಲ್ದಾಣ ಉದ್ಘಾಟಿಸಲಿದ್ದಾರೆ. ಸಗ್ರಿ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗಮಂಡಲ ಕಾರ್ಯಕ್ರಮದಲ್ಲಿ ಹಾಗೂ ಕೃಷ್ಣಮಠ, ಮಲ್ಪೆ ಭಜನಾ ಮಂದಿರದ ಕಾರ್ಯಕ್ರಮ ನಿಗದಿಯಾಗಿದೆ.
ಇಂದು ಸಿಎಂ ಬೊಮ್ಮಾಯಿ ಉಡುಪಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
Comments are closed.