ಕರಾವಳಿ

ಅಲ್ಲಾ ಹೋ ಅಕ್ಬರ್ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್​ ಬಗ್ಗೆ ತನಿಖೆ ನಡೆಸಲು ಸಿಎಂಗೆ ಪತ್ರ ಬರೆದ ಸಂಸದ ಅನಂತ್​ಕುಮಾರ್​ ಹೆಗಡೆ..!

Pinterest LinkedIn Tumblr

ಬೆಂಗಳೂರು: ಮುಸ್ಕಾನ್ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರದಲ್ಲಿ, ‘ಮುಸ್ಕಾನ್ ಮಂಡ್ಯದ ಪಿ.ಇ.ಎಸ್ ಕಾಲೇಜ್‌ನಲ್ಲಿ ಓದುತ್ತಿದ್ದು, ಹಿಜಾಬ್ ವಿವಾದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾಗ. ಮುಸ್ಕಾನ್ ಎಂಬ ಬುರ್ಖಾಧಾರಿ ವಿದ್ಯಾರ್ಥಿನಿಯು “ಅಲ್ಲಾ ಹೋ ಆಕ್ಬರ್” ಎಂದು ಕೂಗಿದ್ದಳು. ಆ ವಿದ್ಯಾರ್ಥಿನಿಯು ದಿಢೀರ್ ಪ್ರಸಿದ್ಧಿಯನ್ನು ಪಡೆದಿದ್ದ ಘಟನೆ ನಡೆದಿತ್ತು. ಈ ವಿದ್ಯಾರ್ಥಿನಿಗೆ ಹಲವಾರು ಮುಸ್ಲಿಂ ಸಂಘಟನೆಗಳಿಂದ ಪ್ರಶಂಸೆಯ ನುಡಿಗಳು ಹಾಗೂ ಬಹುಮಾನಗಳ ಘೋಷಣೆ ಮಾಡಲಾಗಿತ್ತು. ಮುಸ್ಲಿಂ ಭಯೋತ್ಪಾದಕ ಸಂಘಟನೆಯಾದ ಅಲ್-ಖೈದಾದ ಮುಖ್ಯಸ್ಥನಾದ ಆಯಮನ್-ಅಲ್-ಜವಾಹರಿ ಈಕೆಯನ್ನು ಹೊಗಳಿದ್ದು, ಭಾರತದ ಸರ್ವಶ್ರೇಷ್ಟ ಮಹಿಳೆ ಎಂದು ಹೊಗಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿತ್ತು.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರೂ ಸಹಿತ. ಹಲವಾರು ರಾಜಕಾರಣಿಗಳು, ಮೂಲಭೂತವಾದಿ ಸಂಘಟನೆಗಳು ಹಾಗೂ ವಿದ್ಯಾರ್ಥಿನಿಯರು ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿರುತ್ತಾರೆ. ಹಿಜಾಬ್ ಪ್ರತಿಭಟನೆಯ ಹಿಂದೆ ಕಾಣದ ಕೈಗಳ ಕೈವಾಡವಿದೆ ಎಂದು ಉಚ್ಚ ನ್ಯಾಯಲಯ ಪೀಠವು ಅಭಿಪ್ರಾಯ ವ್ಯಕ್ತಪಡಿಸಿರುವುದು ಇಲ್ಲಿ ಉಲ್ಲೇಖನೀಯವಾಗಿದೆ. ಈ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ಮುಸ್ಕಾನ್, ವಿದ್ಯಾರ್ಥಿನಿಗೆ ಹಿಜಾಬ್ ಷಡ್ಯಂತ್ರದ ಹಿಂದಿರುವ ಕಾಣದ ಕೈಗಳು ಮತ್ತು ನಿಷೇಧಿತ ಸಂಘಟನೆಗಳೊಂದಿಗೆ ಇರುವ ಸಂಬಂಧದ ಕುರಿತಂತೆ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ‌ಮನವಿ ಮಾಡಿದ್ದಾರೆ.

Comments are closed.