ಬೆಂಗಳೂರು: ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ಬೆಳಕಿಗೆ ಬಂದಿರುವ ಹಿನ್ನಲೆಯಲ್ಲಿ 54,289 ಅಭ್ಯರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಸರಕಾರ ತೀರ್ಮಾನ ಕೈಗೊಂಡಿದೆ.
ಪರೀಕ್ಷಾ ಅಕ್ರಮದಲ್ಲಿ ಸಿಕ್ಕಿ ಬಿದ್ದಿರುವ ಆರೋಪಿಗಳು ಬಿಟ್ಟು ಉಳಿದೆಲ್ಲವರಿಗೂ ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಸಚಿವ ಆರಗ ಜ್ಞಾನೇಂದ್ರ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ.
ಸರಕಾರದ ನಿರ್ಧಾರಕ್ಕೆ ಪರೀಕ್ಷೆ ಬರೆದ ಹಲವರು ಆಕ್ರೋಶ ಹೊರ ಹಾಕಿದ್ದು, ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಹಲವು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಸಿಐಡಿ ತನಿಖೆ ಚುರುಕು ಗೊಳಿಸಲಾಗಿದೆ. ಇಂದು ಕೂಡ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್‌ತಲೆಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಬಂಧನವಾಗಿತ್ತು.
Comments are closed.