ಕರಾವಳಿ

ಇಂದಿನಿಂದ 4 ದಿನ ಕರ್ನಾಟಕದ ಹಲವೆಡೆ ಮಳೆ ಮುಂದುವರೆಯುವ ಸಾಧ್ಯತೆ..!

Pinterest LinkedIn Tumblr

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ (ಮೇ 11) ರಾತ್ರಿಯಿಂದ ಮಳೆ ಸುರಿಯುತ್ತಿದೆ. ತುಂತುರು ಮಳೆಯಿಂದ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕರ್ತವ್ಯಕ್ಕೆ ಕಚೇರಿಗೆ ತೆರಳಲು ಉದ್ಯೋಗಿಗಳು ಪರದಾಡುವ ಸ್ಥಿತಿ ಎದುರಾಗಿದೆ. ವಿಧಾನಸೌಧ, ಮೆಜೆಸ್ಟಿಕ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಕೆ.ಆರ್.ಮಾರುಕಟ್ಟೆ, ರಾಜಾಜಿನಗರ, ಬಸವನಗುಡಿ ಸೇರಿದಂತೆ ಹಲವೆಡೆ ಮಳೆ ಮುಂದುವರಿದಿದೆ. ಈಗಾಗಲೇ ಅಸಾನಿ ಚಂಡಮಾರುತ ದುರ್ಬಲಗೊಂಡಿದ್ದರೂ ಇಂದಿನಿಂದ 4 ದಿನ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆಯುವ ಸಾಧ್ಯತೆಗಳಿದೆ.

ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದ.ಕ, ಉಡುಪಿ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

Comments are closed.