ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣದ ಆರೋಪಿ ನಾಗೇಶ್ ಕೊನೆಗೂ ಪೊಲೀಸರಿಗೆ ಸಿಕ್ಕಿ ಬಿದಿದ್ದಾನೆ. 16 ದಿನಗಳ ಬಳಿಕ ತಮಿಳುನಾಡಿನಲ್ಲಿ ಆಶ್ರಮವೊಂದರಲ್ಲಿ ಸ್ವಾಮೀಜಿ ಗೆಟಪ್ಪಿನಲ್ಲಿ ಪತ್ತೆಯಾದ ನಾಗೇಶನನ್ನು ಬಂಧಿಸಿ ಬೆಂಗಳೂರಿಗೆ ಕರೆತರುವಾಗ ಎಸ್ಕೇಪ್ ಆಗಲು ಪ್ರಯತ್ನಿಸಿದ್ದು ಪೊಲೀಸರು ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಆ್ಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್, ನೈಸ್ ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ ಫ್ಲೈಓವರ್ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್ನನ್ನು ಹಿಡಿಯಲು ಯತ್ನಿಸಿದ ಪೊಲೀಸ್ ಸಿಬ್ಬಂದಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಗಾಳಿಯಲ್ಲಿ ಗುಂಡುಹಾರಿಸಿ ತಪ್ಪಿಸಿಕೊಳ್ಳದಂತೆ ಇನ್ಸ್ಪೆಕ್ಟರ್ ಎಚ್ಚರಿಕೆ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಇನ್ಸ್ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದರೂ ಕೂಡ ತಪ್ಪಿಸಿಕೊಳ್ಳಲೆತ್ನಿಸಿದಾಗ ನಾಗೇಶ್ ಬಲಕಾಲಿಗೆ ಇನ್ಸ್ಪೆಕ್ಟರ್ ಪ್ರಶಾಂತ್ ಗುಂಡು ಹಾರಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಗಾಯಾಳು ನಾಗನಿಗೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಾಗೇಶ್ಗೆ ಹೆಚ್ಚಿನ ಚಿಕಿತ್ಸೆಗಾಗಿ ಕೆಂಗೇರಿಯ ಬಿ.ಜಿ.ಎಸ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿದ್ದಾರೆ.
Comments are closed.